ರಾಯಚೂರು : ಇತ್ತೀಚೆಗೆ ಸಿಂಧನೂರು ನಗರದಲ್ಲಿ ಜರುಗಿದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ಪೂರ್ಣಿಮಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ವರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತುಳುಸಿರಾವ್ ತಂದೆ ಸಿ.ಭರತ್ ಚದುರಂಗ ಸ್ವರ್ಧೆಯಲ್ಲಿ ಪ್ರಥಮ ಸ್ಥಾನ,
ಜೋಯಾ ಖಾನಂ ತಂದೆ ಮಹಮದ್ ಖಾನ್ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ಸ್ವರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು,
ಗೋವರ್ಧನ್ ರೆಡ್ಡಿ ತಂದೆ.ಭೀಮರೆಡ್ಡಿ ಕರಾಟೆ 52 kg ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು,
ಜಾನ್ ಆಲ್೯ ತಂದೆ ಪ್ರಭುರಾಜ್ ಬಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಈ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದು ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಾಧಿಕಾರಿಗಳಾದ ರಾಕೇಶ್ ರಾಜಲಬಂಡಿ ಹಾಗೂ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಪೋಷಕರು ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷವ್ಯಕ್ತಪಡಿಸಿದ್ದು ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು.
ಕಾಮೆಂಟ್ ಪೋಸ್ಟ್ ಮಾಡಿ