ಬಾಗಲಕೋಟೆ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಉಚ್ಛಾಟನೆ ಮಾಡಲಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕೆಂಬ ಆಗ್ರಹದ ಹೋರಾಟದ ಮೂಲಕ ರಾಜ್ಯವ್ಯಾಪಕವಾಗಿ ಗುರುತಿಸಿಕೊಂಡಿದ್ದ ಸ್ವಾಮೀಜಿಗಳನ್ನು, ಟ್ರಸ್ಟ್ ಸಭೆಯ ನಿರ್ಧಾರದಂತೆ ಪೀಠಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ.
ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ, ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಸ್ವಾಮೀಜಿಗಳು ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವು ಕಡೆ ಆಸ್ತಿ-ಪಾಸ್ತಿಗಳನ್ನು ಮಾಡಿಕೊಂಡಿದ್ದಾರೆ, ಟ್ರಸ್ಟ್ ಸದಸ್ಯರ ಮಾತು ಕೇಳುವುದಿಲ್ಲ ಹಾಗೂ ನಿರ್ವಹಣೆಯಲ್ಲಿ ಅಸಮಾಧಾನ ಇದೆ ಎಂಬ ಕಾರಣಗಳನ್ನು ಉಲ್ಲೇಖಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾಮೆಂಟ್ ಪೋಸ್ಟ್ ಮಾಡಿ