ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕು ಪಡೆದುಕೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯಲ್ಲಿ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಜಿಲ್ಲಾವಾರು ಅಲರ್ಟ್ ವಿವರ:
ಸೆಪ್ಟೆಂಬರ್ 27: ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
ಸೆಪ್ಟೆಂಬರ್ 28: ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.
ಸೆಪ್ಟೆಂಬರ್ 29: ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.
ಮಳೆಯ ಅವಲೋಕನ:
ಬಂಗಾಳ ಕೊಲ್ಲಿಯ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸೆಪ್ಟೆಂಬರ್ 28ರಂದು ಮಹಾರಾಷ್ಟ್ರಕ್ಕೆ, ನಂತರ ಮುಂಬೈ ಕರಾವಳಿ ಮತ್ತು ಕೇರಳ ತೀರದವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಮುಂಗಾರು ಮಳೆ ನಿಧಾನವಾಗಿ ಕ್ಷೀಣಿಸುತ್ತಿದ್ದಂತೆ ಹಿಂಗಾರು ಪ್ರಾರಂಭವಾಗುವ ಲಕ್ಷಣಗಳಿವೆ ಎಂದು ಐಎಂಡಿ ತಿಳಿಸಿದೆ.

ಕಾಮೆಂಟ್ ಪೋಸ್ಟ್ ಮಾಡಿ