Top News

ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಶಾಸಕ ಡಾ. ಶಿವರಾಜ್ ಪಾಟೀಲ್

 

ರಾಯಚೂರು: ಭಾರತ ವಾಸಿಗಳು ಸ್ವಾವಲಂಬಿಗಳಾಗಬೇಕು, ಸ್ವದೇಶಿ ವಸ್ತುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ನೀಡಲಾಗಿದ್ದು, ಪ್ರತಿಯೊಬ್ಬರೂ ಇದಕ್ಕೆ ಕೈಜೋಡಿಸಬೇಕು ಎಂದು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ತಿಳಿಸಿದ್ದಾರೆ.

ಅವರು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.

ಶಿವರಾಜ್ ಪಾಟೀಲ್ ಅವರು, "ಭಾರತದಲ್ಲಿ ಸಂಪೂರ್ಣ ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವಂತಾಗಲು ಎಲ್ಲಾ ಉತ್ಪನ್ನಗಳನ್ನು ಹೆಚ್ಚಿಸಿ, ಪ್ರತಿಯೊಂದು ರಂಗದಲ್ಲಿ ಉತ್ಪಾದನಾ ಕಾರ್ಯವನ್ನು ಕೈಗೊಳ್ಳುವ ಅವಶ್ಯಕತೆಯಿದೆ. ಅಮೇರಿಕಾದಂತಹ ದೊಡ್ಡ ರಾಷ್ಟ್ರಗಳಿಗೂ ತಮ್ಮದೇ ಉತ್ಪಾದನೆ ಇಲ್ಲ, ಅವರು ಸಾಲ ಪಡೆದು ಬದುಕುತ್ತಿದ್ದಾರೆ. ಆದರೆ ಅಲ್ಲಿ ಮಕ್ಕಳಿಗೆ 18 ವರ್ಷವಾದ ನಂತರ ಸ್ವತಂತ್ರ ಜೀವನ ನಡೆಸುವ ಸಂಸ್ಕೃತಿ ಇದೆ. ಜೊತೆಗೆ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತದೆ," ಎಂದು ಹೇಳಿದರು.

ಅವರು ಮುಂದುವರೆದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ, ನಗರ ಘಟಕದ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಇ. ಶಶಿರಾಜ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Post a Comment

ನವೀನ ಹಳೆಯದು