Top News

ಅಂತರ್ಜಲ ವೃದ್ಧಿ ಮತ್ತು ನೀರಾವರಿ ಅಭಿವೃದ್ಧಿಗೆ ವೈಜ್ಞಾನಿಕ ನಿಲುವು – ಡಿಕೆ ಶಿವಕುಮಾರ್

 

ರಾಯಚೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು .22ರಂದು ರಾಯಚೂರು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನೀರಾವರಿ ಕಾಮಗಾರಿಗಳನ್ನು ಪರಿಶೀಲಿಸಿ, ಪಕ್ಷದ ಸಂಘಟನೆ ಶಕ್ತಿಯ ಕುರಿತು ಮಾತನಾಡಿದರು.


 ಮೊದಲಿಗೆ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರು ಪೂಜೆ ಸಲ್ಲಿಸಿ ನಾಡಿನ ಸಮಸ್ತ ಜನತೆಗೆ ಶ್ರೇಯೋಭಿವೃದ್ಧಿ ಕೋರಿ ಪ್ರಾರ್ಥಿಸಿದರು. ನಂತರ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದರು.

  ಬಳಿಕ ಪಂಚಮುಖಿಯಲ್ಲಿ ಆಯೋಜಿಸಿದ್ದ ರಾಯಚೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಾರ್ಯಕರ್ತರ ಶಕ್ತಿಯೇ ಕಾಂಗ್ರೆಸ್ ಪಕ್ಷದ ಶಕ್ತಿ. ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷ ಸದಾ ಪ್ರಾಮುಖ್ಯತೆ ನೀಡುತ್ತದೆ. ಅಭಿವೃದ್ಧಿ ಪರ ಕಾರ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮಾಣಿಕವಾಗಿ ತೊಡಗಿಕೊಂಡಿದೆಎಂದು ಹೇಳಿದರು.


 ನಂತರ ರಾಯಚೂರು ಗ್ರಾಮೀಣದ ಗುಂಜಳ್ಳಿ ಗ್ರಾಮದಲ್ಲಿರುವ ಗುಂಜಳ್ಳಿ ಬಸಪ್ಪ ಕೆರೆ ಏತನೀರಾವರಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಲಾಯಿತು. ತುಂಗಭದ್ರ ನದಿಯಿಂದ 9 ಕೆರೆಗಳಿಗೆ ನೀರು ತುಂಬಿಸುವ ₹146 ಕೋಟಿ ರೂಗಳ ಯೋಜನೆ ಅಂತರ್ಜಲ ವೃದ್ಧಿ ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಮಹತ್ವದಾಗಿದೆ. ಉಪಮುಖ್ಯಮಂತ್ರಿಗಳು ಕಾಮಗಾರಿ ಗುಣಮಟ್ಟವನ್ನು ಕಾಪಾಡುತ್ತ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಗುಂಜಳ್ಳಿ ಯೋಜನೆಗೆ ಅಗತ್ಯ ಅನುದಾನ ಈಗಾಗಲೇ ಬಿಡುಗಡೆ ಮಾಡಿರುವುದಾಗಿ ಅವರು ತಿಳಿಸಿ, ರಾಯಚೂರು ಗ್ರಾಮೀಣ ಪ್ರದೇಶವನ್ನು ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

 ಅದಾದ ಬಳಿಕ ಚೀಕಲಪರ್ವಿ ಹಾಗೂ ಚಿಕ್ಕ ಮಂಚಾಲಿ ಬ್ರಿಡ್ಜ್ ಕಮ್ ಬ್ಯಾರೆಜ್ ಯೋಜನಾ ವಿಷಯವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಾಂತ್ರಿಕ ವಿವರಗಳನ್ನು ಪರಿಶೀಲಿಸಿದರು.

 ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಜನರಿಗೆ ನೀರಾವರಿ ಹಾಗೂ ಕುಡಿಯುವ ನೀರಿನ ಅನುಕೂಲ ನೀಡುವ ಉದ್ದೇಶದಿಂದ ಕಾಮಗಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆಂಧ್ರ ಮತ್ತು ತೆಲಂಗಾಣದ ಆಕ್ಷೇಪಣೆಗಳ ಕುರಿತು ಎರಡು ರಾಜ್ಯಗಳ ಸಹಮತದೊಂದಿಗೆ ಕಾರ್ಯಾರಂಭ ಮಾಡಲಾಗುವುದು ಎಂದು ಭರವಸೆ ನೀಡಿದರು.


 ಸಚಿವ ಬೋಸರಾಜು ಮತ್ತು ಶಾಸಕ ಬಸನಗೌಡ ದದ್ದಲ್ ಅವರು ಕಾಮಗಾರಿಯ ಅವಶ್ಯಕತೆ ಹಾಗೂ ತಾಂತ್ರಿಕ ವಿವರಗಳನ್ನು ಉಪಮುಖ್ಯಮಂತ್ರಿಗಳಿಗೆ ತಿಳಿಸಿದರು. ಅಧಿಕಾರಿಗಳು ಚಿಕ್ಕ ಮಂಚಾಲಿ ಬ್ಯಾರೆಜ್ ನಿರ್ಮಾಣದಿಂದ ಆಂಧ್ರ ಪ್ರದೇಶದ ಸುಂಕೇಶ್ವರ ಬ್ಯಾರೆಜ್ಗೆ ಯಾವುದೇ ಹಾನಿಯಿಲ್ಲ ಎಂಬ ವರದಿ ಸಿದ್ಧವಾಗುತ್ತಿದೆ ಎಂದು ವಿವರಿಸಿದರು.

 ಕಳೆದ ವರ್ಷ ನಡೆದ ಸಂಪುಟ ಸಭೆಯಲ್ಲಿ ಚಿಕ್ಕ ಮಂಚಾಲಿ ಬ್ರಿಡ್ಜ್ ಕಮ್ ಬ್ಯಾರೆಜ್ಗೆ ₹158 ಕೋಟಿ ಹಾಗೂ ಚೀಕಲಪರ್ವಿ ಬ್ರಿಡ್ಜ್ ಕಮ್ ಬ್ಯಾರೆಜ್ಗೆ ಅನುಮೋದನೆ ನೀಡಲಾಗಿದೆ. ಕಾಮಗಾರಿಗಳು ಪೂರ್ಣಗೊಂಡರೆ ರಾಯಚೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಶಾಶ್ವತ ನೀರಾವರಿ ಪರಿಹಾರ ದೊರೆಯಲಿದೆ.

  ಸಂದರ್ಭದಲ್ಲಿ ಶಾಸಕರಾದ ಬಸನಗೌಡ ದದ್ದಲ್, ಸಂಸದ ಜಿ.ಕುಮಾರ ನಾಯಕ, ಪರಿಷತ್ ಸದಸ್ಯ .ವಸಂತಕುಮಾರ್, ಹಂಪಯ್ಯ ನಾಯಕ, ಬಸನಗೌಡ ತುರುವಿಹಾಳ, ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಬಸವರಾಜ ಪಾಟೀಲ್ ಇಟಗಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಜಿ.ಶಿವಮೂರ್ತಿ, ಅಸ್ಲಾಂಪಾಶಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Post a Comment

ನವೀನ ಹಳೆಯದು