
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ನಿವೃತ್ತ ಉಪ ತಹಸೀಲ್ದಾರ್ ಮಲ್ಲಣ್ಣ ಅವರನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ ನೇಮಕ ಮಾಡಿದ್ದಾರೆ.
ಚುನಾವಣೆ ನಿಯಮಗಳು ಮತ್ತು ಸಂಘದ ಬೈಲಾ ಪ್ರಕಾರ ಚುನಾವಣಾ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಚುನಾವಣಾ ಕ್ರಮದಲ್ಲಿ ಬೈಲಾ ನಿಯಮಗಳ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ ರಾಜ್ಯ ಚುನಾವಣಾಧಿಕಾರಿಯವರನ್ನು ಸಂಪರ್ಕಿಸಲು ಸೂಚಿಸಲಾಗಿದೆ, ಎಂದು ಆದೇಶ ಪತ್ರದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ ತಿಳಿಸಿದ್ದಾರೆ.
ಕಾಮೆಂಟ್ ಪೋಸ್ಟ್ ಮಾಡಿ