Top News

ಮಹಿಳಾ ನೌಕರರಿಗೆ ಋತುಚಕ್ರ ರಜೆ ಅನುಮೋದನೆಗೆ ಸರ್ಕಾರಕ್ಕೆ ಅಭಿನಂದನೆ : ಕೃಷ್ಣ ಶಾವಂತಗೇರಿ

ರಾಯಚೂರು: ರಾಜ್ಯದ ಸಮಸ್ತ ಮಹಿಳಾ ನೌಕರರಿಗೆ ವೇತನಸಹಿತ ಋತುಚಕ್ರ ರಜೆಯನ್ನು ಮಂಜೂರು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಅಭಿನಂದನೆಗೆ ಪಾತ್ರವಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ ತಿಳಿಸಿದ್ದಾರೆ.

ರಾಜ್ಯದ ಮಹಿಳಾ ನೌಕರರು ಹಾಗೂ ಶಿಕ್ಷಕಿಯರ ಸಮಸ್ಯೆಗಳನ್ನು ಪರಿಗಣಿಸಿ, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ನೌಕರರಿಗೆ ಒಂದು ದಿನದ ವೇತನಸಹಿತ ಋತುಚಕ್ರ ರಜೆ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮಹತ್ವದ ನಿರ್ಧಾರಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ, ಸಚಿವ ಸಂಪುಟದ ಎಲ್ಲ ಸದಸ್ಯರು ಹಾಗೂ ಜಿಲ್ಲೆಯ ಎಲ್ಲ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ ಎಂದು ಶಾವಂತಗೇರಿ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಕಾರ್ಯಾಧ್ಯಕ್ಷರಾದ ಶಂಕರಗೌಡ ಎಸ್. ಪಾಟೀಲ್, ಕಾರ್ಯದರ್ಶಿ ಭೀಮೇಶನಾಯಕ, ಗೌರವಾಧ್ಯಕ್ಷ ಭೀಮರಾಜ, ಖಜಾಂಚಿ ಪ್ರಸನ್ನಕುಮಾರ, ರಾಜ್ಯ ಪರಿಷತ್ ಸದಸ್ಯ ಎಹಸನ್ ಉಲ್ ಹಕ್ ಹಾಗೂ ಇತರ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

Post a Comment

ನವೀನ ಹಳೆಯದು