Top News

ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಇಳಿಸಿದರೆ ಜಿಲ್ಲೆಯಾಧ್ಯಂತ ಹೋರಾಟ- ಕೆ.ಬಸವಂತಪ್ಪ


ರಾಯಚೂರು: ಹಿಂದುಳಿದ ವರ್ಗ ನಾಯಕ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಇಳಿಸುವ ಪ್ರಯತ್ನಗಳು ಖಂಡನೀಯವಾಗಿದ್ದು, ಪಾರದರ್ಶಕ ಆಡಳಿತ ನಡೆಸಿದ ಸಿದ್ದರಾಮಯ್ಯ ಇವರನ್ನು ಅಧಿಕಾರದಿಂದ ಕೆಳಗೆ ಇಳಿಸಿದರೆ ಜಿಲ್ಲಾಧ್ಯಂತ ತೀವ್ರ ಸ್ವರೂಪದ ಹೋರಾಟ ನಡೆಸುವದಾಗಿ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಕೆ.ಬಸವಂತಪ್ಪ ಹೇಳಿದರು.

ಅವರಿಂದುಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯನವರೇ ಕಾರಣವಾಗಿದ್ದಾರೆ. ಯಾವುದೇ ಆರೋಪಗಳಿಲ್ಲದೇ ಇದ್ದರೂ ಮುಖ್ಯಮಂತ್ರಿ ಬದಲಾವಣೆಗೆ ಒತ್ತಾಯಗಳು, ಚಟುವಟಿಕೆಗಳು ಪ್ರಾರಂಭವಾಗಿವೆ. ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರನ್ನು ಕೆಳಗಿಸಿದರೆ ಬಿಹಾರದಲ್ಲಿ ಕಾಂಗ್ರೆಸ್ ಆಗಿರುವ ಸ್ಥಿತಿಯೇ ರಾಜ್ಯದಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಒಂದು ಸಮೂದಾಯವರ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಪಕ್ಷ ಬದಲಾವಣೆಗೆ ಮುಂದಾದರೆ ಜಿಲ್ಲೆ ಎಲ್ಲಾ ತಾಲೂಕ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಧಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರನ್ನೇ ಐದು ವರ್ಷ ಆಡಳಿತದಲ್ಲಿ ಮುಂದುವರಸಬೇಕೆOದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಬಿ.ಬಸವರಾಜ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವ ಪಾರದರ್ಶಕ ಆಡಳಿತದಿಂದ ರಾಜ್ಯ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಜನಪರವಾದ ಆಡಳಿತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಬದಲಾವಣೆಗೆ ಮುಂದಾದರೆ ಹಿಂದುಳಿದ ವರ್ಗವನ್ನು ಕಡೆಗಣಿಸಲಾಗುತ್ತದೆ. ಸಿದ್ದರಾಮಯ್ಯನವರನ್ನೇ ಐದು ವರ್ಷ ಆಡಳಿತ ಮಾಡಲು ಅವಕಾಶ ನೀಡಬೇಕೆಂದರು.

ಈ ಸಂದರ್ಭದಲ್ಲಿ ರಾಜ್ಯ ನಿರ್ದೇಶಕ ಭೀಮಪ್ಪ ಕಡದರದಿನ್ನಿ, ಹನುಮಂತಪ್ಪ ಜಾಲಿಬೆಂಚಿ ,ನಾಗೇಂದ್ರಪ್ಪ ಮಟಮಾರಿ, ಶೇಖರ ವಾರದ, ನಾಗರಾಜಮಡ್ಡಿಪೇಟೆ, ಹನುಮಂತಪ್ಪ ವಕೀಲ, ರಾಮನಗೌಡ ವಕೀಲ ಇದ್ದರು.

Post a Comment

ನವೀನ ಹಳೆಯದು